ತಮ್ಮ ಅಭಿನಯದ ಮೂಲಕ ಜನಮನ ಗೆದ್ದಿರುವ ಆದಿತ್ಯ ನಾಯಕರಾಗಿ ನಟಿಸುತ್ತಿರುವ “ಟೆರರ್” ಚಿತ್ರದ ಫಸ್ಟ್ ಲುಕ್ ಹಾಗೂ ಕ್ಯಾರೆಕ್ಟರ್ ಟೀಸರ್ ಲಹರಿ ಮ್ಯೂಸಿಕ್ ಯೂಟ್ಯೂಬ್ ಮೂಲಕ ಬಿಡುಗಡೆಯಾಗಿದೆ. ಜನವರಿಯಲ್ಲಿ ಚಿತ್ರಕ್ಕೆ ಮುಹೂರ್ತ ನಡೆಯಲಿದೆ. ಈ ಚಿತ್ರದ ಫಸ್ಟ್ ಲುಕ್ ಅದ್ದೂರಿಯಾಗಿ ಬಂದಿದ್ದು, ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದೆ.
ಉಪೇಂದ್ರ ಅಭಿನಯದ “A” ಚಿತ್ರ ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳನ್ನು ನಿರ್ಮುಸಿರುವ ಸಿಲ್ಕ್ ಮಂಜು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಂಜನ್ ಶಿವರಾಮ ಗೌಡ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಕೂಡ ರಂಜನ್ ಅವರದೆ.
ಇದೇ ಮೊದಲ ಬಾರಿಗೆ ಆದಿತ್ಯ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಅದ್ದೂರಿಯಾಗಿ ನಿರ್ಮಾಣವಾಗುತ್ತಿದೆ. ಆದಿತ್ಯ ಅವರು ಈ ಹಿಂದೆ ಅಭಿನಯಿಸಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಈತನಕ ಯಾರು ಮಾಡಿರದ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಹೇಳಬಹುದು. ಆದಿತ್ಯ ಈ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ದಕ್ಷಿಣ ಭಾರತದ ಸುಪ್ರಸಿದ್ಧ ನಟರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾಹಿತಿ ನೀಡುವುದಾಗಿ ನಿರ್ದೇಶಕ ರಂಜನ್ ಶಿವರಾಮ ಗೌಡ ತಿಳಿಸಿದ್ದಾರೆ.ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಹರ್ಷವರ್ಧನ್ ರಾಜ್ ಸಂಗೀತ ನೀಡಲಿದ್ದಾರೆ. ಕಾರ್ತಿಕ್ ಶರ್ಮ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ಕನಲ್ ಕಣ್ಣನ್ ಅವರ ಸಾಹಸ ನಿರ್ದೇಶನ “ಟೆರರ್” ಚಿತ್ರಕ್ಕಿರಲಿದೆ.