Left Ad
ಮಾತಿನಮನೆಯಲ್ಲಿ "ದ ಜಡ್ಜ್ ಮೆಂಟ್" . - Chittara news
# Tags

ಮಾತಿನಮನೆಯಲ್ಲಿ “ದ ಜಡ್ಜ್ ಮೆಂಟ್” .

ಜಿ 9 ಕಮ್ಯುನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶಾರದ ನಾಡಗೌಡ, ವಿಶ್ವನಾಥ ಗುಪ್ತ, ರಾಮು ರಾಯಚೂರು, ರಾಜಶೇಖರ ಪಾಟೀಲ ಮತ್ತು ಪ್ರತಿಮ ಬಿರಾದಾರ ನಿರ್ಮಿಸುತ್ತಿರುವ ಹಾಗೂ ಗುರುರಾಜ ಕುಲಕರ್ಣಿ (ನಾಡಗೌಡ) ರಚನೆ ಹಾಗೂ ನಿರ್ದೇಶನದ “ದ ಜಡ್ಜ್ ಮೆಂಟ್” ಚಿತ್ರಕ್ಕೆ ಮಾತಿನ ಜೋಡಣೆ ಆರಂಭವಾಗಿದೆ. ಚಿತ್ರಕ್ಕೆ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ.ಅಪಾರವೆಚ್ಚದಲ್ಲಿ ಅದ್ದೂರಿ ತಾರಾಗಣದೊಂದಿಗೆ ನಿರ್ಮಾಣವಾಗುತ್ತಿರುವ ಈ ಚಿತ್ರ ಆರಂಭದಿಂದಲೂ ಸದ್ದು ಮಾಡುತ್ತಿದೆ.

ಇದನ್ನೂ ಓದಿ  ತೀವ್ರ ಬಿಗಡಾಯಿಸಿರುವ ನಟಿ ಲೀಲಾವತಿ ಆರೋಗ್ಯ: ಶಿವಣ್ಣ, ಡಿಕೆಶಿ ಭೇಟಿ

ಕ್ರೇಜಿಸ್ಟಾರ್ ರವಿಚಂದ್ರನ್ ಈ ಚಿತ್ರದಲ್ಲಿ ವಕೀಲರಾಗಿ ಅಭಿನಯಿಸಿದ್ದಾರೆ. ದಿಗಂತ ಮಂಚಾಲೆ, ಮೇಘನಾ ಗಾವಂಕರ, ಧನ್ಯಾ ರಾಮಕುಮಾರ, ಲಕ್ಷ್ಮೀ ಗೋಪಾಲಸ್ವಾಮಿ, ಪ್ರಕಾಶ ಬೆಳವಾಡಿ, ಟಿ ಎಸ್ ನಾಗಾಭರಣ, ಕೃಷ್ಣಾ ಹೆಬ್ಬಾಳೆ, ರಂಗಾಯಣ ರಘು, ರಾಜೇಂದ್ರ ಕಾರಂತ, ರವಿಶಂಕರ ಗೌಡ ಸುಜಯ ಶಾಸ್ತ್ರೀ, ರೇಖಾ ಕೂಡ್ಲಿಗಿ, ರೂಪಾ ರಾಯಪ್ಪ, ಪ್ರೀತಂ, ಅಶ್ವಿನ್ ರಾವ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ  ಡಾ.ವಿಷ್ಣುವರ್ಧನ್‌ ಅವರ ಪುಣ್ಯಭೂಮಿಗಾಗಿ ಡಿಸೆಂಬರ್‌ 17 ರಂದು ಬೃಹತ್‌ ಪ್ರತಿಭಟನೆ.

ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶಿಸಿರುವ “ದ ಜಡ್ಜ್ ಮೆಂಟ್” ಚಿತ್ರಕ್ಕೆ ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಪ್ರಮೋದ್ ಮರವಂತೆ ಹಾಡುಗಳನ್ನು ರಚಿಸಿದ್ದಾರೆ. ಅನೂಪ ಸೀಳಿನ ಸಂಗೀತ ಸಂಯೋಜಿಸಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಕೆಂಪರಾಜ್ ಬಿ ಎಸ್ ಸಂಕಲನವಿರುವ ಈ ಚಿತ್ರದ ಸ್ಕ್ರಿಪ್ಟ್ ಸೂಪರ್ ವೈಸರ್ ಆಗಿ ಪಿ. ವಾಸುದೇವ ಮೂರ್ತಿ ಕಾರ್ಯ ನಿರ್ವಹಿಸಿದ್ದಾರೆ.

Spread the love
Translate »
Right Ad