Sandalwood Leading OnlineMedia

ಶೂಟಿಂಗ್ ಮುಗಿಸಿದ ‘ಆಪರೇಷನ್ ಡಿ’ ಸಿನಿಮಾ

ಕಾಮಿಡಿ ಕ್ರೈಂ ಥ್ರಿಲ್ಲರ್ ಕಥಾಹಂದರದ “ಆಪರೇಶನ್ ಡಿ” ಚಿತ್ರೀಕರಣ ಮುಕ್ತಾಯದ ಹಂತ ತಲುಪಿದೆ ಒಂದು ಚಿಕ್ಕ ಸನ್ನಿವೇಶದ ಚಿತ್ರೀಕರಣ ಮುಗಿದ ನಂತರ ಕುಂಬಳಕಾಯಿ, ಈಗಾಗಲೇ ಚಿತ್ರದ Background Music ಬಿರುಸಿನಿಂದ ಸಾಗಿದೆ, ಹೊಸ ವರ್ಷದ ಮೊದಲ ವಾರಕ್ಕೆ ಮಾತಿನ ಜೋಡಣೆ ಆರಂಭ.
 
ತಿರುಪತಿ, ಮಸ್ತಿ, ಬಣ್ಣ ಬಣ್ಣದ ಲೋಕ, ರಾಗಶೃಂಗ, ಟೇಕ್ ಇಟ್ ಈಸಿ, ಧನ್ ಧನಾ ಧನ್, ಭಗವದ್ ಶ್ರೀ ರಾಮನುಜ, ವಿಶ್ವಾರಾಧ್ಯರು, ಬೀರಬಲ್, ಶ್ರೀಶಂಕರ ಹಾಗೂ ಮುಂತಾದ ಸಿನಿಮಾಗಳಲ್ಲಿ ನಟನಾಗಿದ್ದ ತಿರುಮಲೇಶ್ ವಿ ಈಗ ನಿರ್ದೇಶಕರಾಗಿ ಚಿತ್ರರಂಗ ಪ್ರವೇಶ, ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸುತ್ತಿರುವ *”ಆಪರೇಶನ್ ಡಿ”* ಚಿತ್ರಕ್ಕೆ ಕಲಾವಿದರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ತಿರುಮಲೇಶ್, ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ರಾಜ ರವಿಶಂಕರ್, ತಿರುಮಲೇಶ್, ಸಿದ್ದರಾಜು, ಪ್ರಶಾಂತ್ ಸಂಭಾಷಣೆ ಬರೆದಿದ್ದಾರೆ. ವೇದಿಕ, ದ್ವೇಪಾಯನ‌ ಸಿಂಗ ಹಾಗೂ ಸಂತೋಷ್ ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.
 
 
 
 
ಕೆಂಪಗಿರಿ ಹಾಗೂ ವೇದಿಕ ಹಾಡುಗಳನ್ನು ರಚಿಸಿದ್ದಾರೆ. ಕಾರ್ತಿಕ್ ಪ್ರಸಾದ್ ಛಾಯಾಗ್ರಹಣ, ವಿಕ್ರಮ್ ಶ್ರೀಧರ್ ಸಂಕಲನ ಹಾಗೂ ತರ್ಮಾಕೋಲ್ ಶ್ರೀನಿವಾಸ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಹಾಗೂ ಕ್ರಿಯೇಟಿವ್ ಹೆಡ್ ಸುರೇಶ್ .ಬಿ. ಇನ್ನು ಹಲವು ಸಹ ನಿರ್ಮಾಪಕರ ಹೆಸರು ಪಟ್ಟಿಯಲ್ಲಿದೆ. ಜಯ ಹರಿಪ್ರಸಾದ್(ಜೆರ್ರಿ ಮಾಸ್ಟರ್‌) ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ವಿನೋದ್ ದೇವ್, ಸುಹಾಸ್ ಆತ್ರೇಯ, ರುದ್ರೇಶ್ ಬೂದನೂರು ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದು, ನಾಯಕಿಯರಾಗಿ ಸ್ನೇಹ ಭಟ್, ಇಂಚರ ಬಿ ಚನ್ನಪ್ಳ ಇದ್ದಾರೆ.
 
ಶಿವಮಂಜು, ವೆಂಕಟಾಚಲ, ಜೂ ನರಸಿಂಹರಾಜು, ರಂಗನಾಥ ಬಿ, ಶ್ರೀಧರ್ ಟಿ ಎಸ್, ಸುರೇಶ್ ಬಿ, ಸಂಚಯ ನಾಗರಾಜ್, ಶಿವಾನಂದ, ಆಶಾ, ರೂಪ ಆರ್, ಮಹೇಶ್ ಎಸ್ ಕಲಿ, ಕಿರಣ್, ಸಂತೋಷ್, ಖಾದರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Share this post:

Related Posts

To Subscribe to our News Letter.

Translate »