ಇತ್ತೀಚಿಗೆ ದಕ್ಷಿಣ ಕನ್ನಡದ ಭವ್ಯ ಪರಂಪರೆಯ ಕುರಿತಾದ ಚಿತ್ರಗಳು ಹೆಚ್ಚು ಬರುತ್ತಿದೆ. “ಕುದ್ರು” ಸಹ ಅದೇ ಸುಂದರ ಪರಿಸರದಲ್ಲಿ ನಡೆಯವ ಕಥೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.
ನರರಾಕ್ಷಸನಾಗಿ ರಾಜ್‌ಮನೀಶ್ ಈವಾರ ಥೀಯೇಟರ್‌ನಲ್ಲಿ ಭರ್ಜರಿ ಎಂಟ್ರಿ
ನಾನು ಮೂಲತಃ ಉಡುಪಿಯವನು. ನೀರಿನಿಂದ ಸುತ್ತುವರೆದ ದ್ವೀಪವನ್ನು ತುಳುವಿನಲ್ಲಿ “ಕುದ್ರು ಎನ್ನುತ್ತಾರೆ. ಈ ಚಿತ್ರದ ಕಥೆಯನ್ನು ನಾನೇ ಬರೆದಿದ್ದೇನೆ. ಮಧು ವೈ ಜಿ ಹಳ್ಳಿ ನಿರ್ದೇಶನ ಮಾಡಿದ್ದಾರೆ. “ಕುದ್ರು” ದ್ವೀಪದಲ್ಲಿ ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಮೂರು ಪಂಗಡದವರು ವಾಸಿಸುತ್ತಿರುತ್ತಾರೆ. ಎಲ್ಲರೂ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಈ ರೀತಿಯಲ್ಲಿ ನಮ್ಮ ಚಿತ್ರದ ಕಥೆ ಸಾಗುತ್ತದೆ. ಉಡುಪಿ, ಬೆಂಗಳೂರು, ಗೋವಾ ಹಾಗೂ ಸೌದಿ ಅರೇಬಿಯಾದಲ್ಲಿ ಚಿತ್ರೀಕರಣ ಮಾಡಿದ್ದೇವೆ. ಇಂದು ಅಭಿಮಾನ್ ಸ್ಟುಡಿಯೋದಲ್ಲಿ ಹಾಡಿನ ಚಿತ್ರೀಕರಣ ಮಾಡಿತ್ತಿದ್ದೇವೆ. ಈ ಹಾಡಿಗೆ ಹೆಜ್ಜೆ ಹಾಕಲು ದೂರದ ದೆಹಲಿಯಿಂದ ನಟಿ ನಮ್ರತಾ ಮಲ್ಲ ಬಂದಿದ್ದಾರೆ ಎಂದರು ನಿರ್ಮಾಪಕ ಹಾಗೂ ಕಥೆಗಾರ ಭಾಸ್ಕರ್ ನಾಯಕ್.
ಕಡಲೆಕಾಯಿ ಪರಿಷೆಯಲ್ಲಿ ‘ಮೇಡ್ ಇನ್ ಬೆಂಗಳೂರು’ ಚಿತ್ರದ ಭರ್ಜರಿ ಪ್ರಚಾರ
“ಕುದ್ರು” ನನ್ನ ಮೊದಲ ನಿರ್ದೇಶನದ ಚಿತ್ರ. ಒಂದು ಸಣ್ಣ ದ್ವೀಪದಲ್ಲಿ ಬೇರೆಬೇರೆ ಸಮುದಾಯದವರು ಸಾಮರಸ್ಯದಿಂದ ಬಾಳುತ್ತಿದಾಗ, ಒಂದು ವಾಟ್ಸಾಪ್ ಸಂದೇಶ ಹೇಗೆ ಅಶಾಂತಿಯನ್ನು ತಂದು ಹಾಕುತ್ತದೆ ಹಾಗೂ ಬಂದ ತೊಂದರೆಯನ್ನು ನಿವಾರಣೆ ಮಾಡಿಕೊಂಡು ಮತ್ತೆ ಸಾಮರಸ್ಯದಿಂದ ಹೇಗೆ ಜೀವನ ನಡೆಸಬಹುದು ಎಂಬುದನ್ನು “ಕುದ್ರು” ಚಿತ್ರದಲ್ಲಿ ತೋರಿಸುತ್ತಿದ್ದೇವೆ. ಹರ್ಷಿತ್ ಶೆಟ್ಟಿ, ಗಾಡ್ವಿನ್ ಹಾಗೂ ಫರ್ಹಾನ್ ಚಿತ್ರದ ನಾಯಕರಾಗಿ ನಟಿಸಿದ್ದು, ಪ್ರಿಯಾ ಹೆಗ್ಡೆ, ವಿನುತ ಹಾಗೂ ಡೈನ ಡಿಸೋಜ ನಾಯಕಿಯಾಗಿ ಅಭಿನಯಿಸಿದ್ದಾರೆ. ಮೂವರು ನಾಯಕರು ನಮ್ರತಾ ಅವರೊಂದಿಗೆ ಅಭಿನಯಿಸುತ್ತಿರುವ ಈ ಹಾಡಿನ ಚಿತ್ರೀಕರಣದೊಂದಿಗೆ ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯವಾಗಲಿದೆ. ಪ್ರತೀಕ್ ಕುಂಡು ಸಂಗೀತ ನಿರ್ದೇಶನ ಹಾಗೂ ದೀಪು ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಎಪ್ಪತ್ತಕ್ಕೂ ಅಧಿಕ ಭಾಗದ ಚಿತ್ರೀಕರಣ ರೈನ್ ಎಫೆಕ್ಟ್ ನಲ್ಲೇ ನಡೆದಿರುವುದು ಚಿತ್ರದ ವಿಶೇಷ ಎಂದರು ನಿರ್ದೇಶಕ ಮಧು ವೈ ಜಿ ಹಳ್ಳಿ.
ರೋಚಕ ಅನುಭವ ನೀಡಲು, ಡಾ. 56 ಮೂಲಕ ಸಿಬಿಐ ಆಫೀಸರ್ ಆಗಿ ಡಿಸೆಂಬರ್ 9ಕ್ಕೆ ಬರ್ತಿದ್ದಾರೆ ಪ್ರಿಯಾಮಣಿ
ನಾನು ಈ ಚಿತ್ರದಲ್ಲಿ ತುಂಟ ಮುಸ್ಲಿಂ ಸಮುದಾಯದ ಹುಡುಗಿಯಾಗಿ ಸಕಲೇಶಪುರದ ಡೈನ ಡಿಸೋಜ, ಬ್ರಾಹ್ಮಣ ಹುಡುಗನಾಗಿ ಹರ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ಕ್ರಿಶ್ಚಿಯನ್ ಹುಡುಗನ ಪಾತ್ರಧಾರಿ ಗಾಡ್ವಿನ್ ಹಾಗೂ ಮುಸ್ಲಿಂ ಹುಡುಗನ ಪಾತ್ರದಲ್ಲಿ ಪಾತ್ರದಲ್ಲಿ ಅಭಿನಯಿಸಿರುವ ಫರ್ಹಾನ್ ಹಾಗೂ ಚಿತ್ರದಲ್ಲಿ ಬ್ರಾಹ್ಮಣ ಹುಡುಗಿ ಪಾತ್ರಧಾರಿ ನಾಯಕಿ ಪ್ರಿಯಾ ಹೆಗ್ಡೆ ತಮ್ಮ ಪಾತ್ರದ ಕುರಿತು ಮಾತನಾಡಿದರು.