Sandalwood Leading OnlineMedia

*ಶ್ರೀಕೃಷ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಮೂಡಿ ಬಂತು ತಿಮ್ಮನ ಮೊಟ್ಟೆಗಳು*

ತಿಮ್ಮನ ಮೊಟ್ಟೆಗಳು

ಶ್ರೀಕೃಷ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಮೂಡಿ ಬಂದ “ತಿಮ್ಮನ ಮೊಟ್ಟೆಗಳು” ಚಿತ್ರಕ್ಕೆ ಸೆನ್ಸಾರ್ “ಯು” ಸರ್ಟಿಫಿಕೇಟ್ ನೀಡಿದೆ. ಆದರ್ಶ ಅಯ್ಯಂಗಾರ್ ಅವರ ನಿರ್ಮಾಣದಲ್ಲಿ ತಯಾರಾದ ಈ ಚಿತ್ರಕ್ಕೆ ರಕ್ಷಿತ್ ತೀರ್ಥಹಳ್ಳಿಯವರ ನಿರ್ದೇಶನವಿದೆ. ನಿರ್ದೇಶಕರೆ ಬರೆದ “ಕಾಡಿನ ನೆಂಟರು” ಎಂಬ ಕಥಾ ಸಂಕಲನದಿಂದ ಆಯ್ದ ಕಥೆ ತಿಮ್ಮನ ಮೊಟ್ಟೆಗಳು ಸಿನಿಮಾವಾಗಿದೆ.

ಚಿತ್ರದಲ್ಲಿ ಶೃಂಗೇರಿಯ ರಂಗ ಪ್ರತಿಭೆ ಕೇಶವ್ ಗುತ್ತಳಿಕೆ, ಸುಚೇಂದ್ರ ಪ್ರಸಾದ್, ಆಶಿಕಾ ಸೋಮಶೇಖರ್, ಶೃಂಗೇರಿ ರಾಮಣ್ಣ, ರಾಘು ರಾಮನಕೊಪ್ಪ, ಪ್ರಗತಿ ಪ್ರಭು, ಮಾಸ್ಟರ್ ಹರ್ಷ, ವಿನಯ್ ಕಣಿವೆ ಮುಂತಾದವರು ನಟಿಸಿದ್ದಾರೆ. ಪ್ರವೀಣ್. ಎಸ್ ಛಾಯಾಗ್ರಹಣ, ಬಿ.ಎಸ್. ಕೆಂಪರಾಜ್ ಅವರ ಸಂಕಲನ ಹಾಗೂ ಹೇಮಂತ್ ಜೋಯ್ಸ್ ಸಂಗೀತ ಚಿತ್ರಕ್ಕಿದೆ. ರಕ್ಷಿತ್ ತೀರ್ಥಹಳ್ಳಿ ಸಾಹಿತ್ಯ ಬರೆದಿರುವ ಮೂರು ಹಾಡುಗಳಿಗೆ ವಾಸುಕಿ ವೈಭವ್, ಐಶ್ವರ್ಯ ರಂಗರಾಜನ್, ಆದರ್ಶ್ ಅಯ್ಯಂಗಾರ್ ಮತ್ತು ಚಿನ್ಮಯಿ ಚಂದ್ರಶೇಖರ್ ದನಿಯಾಗಿದ್ದಾರೆ.

ಮನುಷ್ಯನ ನಂಬಿಕೆ ಮತ್ತು ಆತನ ಆಚರಣೆಗಳ ಮೇಲೆ ಕೇಂದ್ರೀಕೃತವಾಗಿರುವ ಕಥಾವಸ್ತುವನ್ನು ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಸುತ್ತಲಿನ ಹಲವು ಸುಂದರ ಜಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಇದೀಗ ಮೇಕಿಂಗ್ ಟೀಸರ್ ಬಿಡುಗಡೆ ಮಾಡಿರುವ ಚಿತ್ರ ತಂಡ ಮಾರ್ಕೆಟಿಂಗ್ ಕೆಲಸದಲ್ಲಿ ತೊಡಗಿದ್ದು ಸದ್ಯದಲ್ಲೆ ತೆರೆಯ ಮೇಲೆ ಬರಲು ತಯ್ಯಾರಿ ನಡೆಸಿದೆ.ದ “ತಿಮ್ಮನ ಮೊಟ್ಟೆಗಳು” ಚಿತ್ರಕ್ಕೆ ಸೆನ್ಸಾರ್ “ಯು” ಸರ್ಟಿಫಿಕೇಟ್ ನೀಡಿದೆ. ಆದರ್ಶ ಅಯ್ಯಂಗಾರ್ ಅವರ ನಿರ್ಮಾಣದಲ್ಲಿ ತಯಾರಾದ ಈ ಚಿತ್ರಕ್ಕೆ ರಕ್ಷಿತ್ ತೀರ್ಥಹಳ್ಳಿಯವರ ನಿರ್ದೇಶನವಿದೆ. ನಿರ್ದೇಶಕರೆ ಬರೆದ “ಕಾಡಿನ ನೆಂಟರು” ಎಂಬ ಕಥಾ ಸಂಕಲನದಿಂದ ಆಯ್ದ ಕಥೆ ತಿಮ್ಮನ ಮೊಟ್ಟೆಗಳು ಸಿನಿಮಾವಾಗಿದೆ.

ಚಿತ್ರದಲ್ಲಿ ಶೃಂಗೇರಿಯ ರಂಗ ಪ್ರತಿಭೆ ಕೇಶವ್ ಗುತ್ತಳಿಕೆ, ಸುಚೇಂದ್ರ ಪ್ರಸಾದ್, ಆಶಿಕಾ ಸೋಮಶೇಖರ್, ಶೃಂಗೇರಿ ರಾಮಣ್ಣ, ರಾಘು ರಾಮನಕೊಪ್ಪ, ಪ್ರಗತಿ ಪ್ರಭು, ಮಾಸ್ಟರ್ ಹರ್ಷ, ವಿನಯ್ ಕಣಿವೆ ಮುಂತಾದವರು ನಟಿಸಿದ್ದಾರೆ. ಪ್ರವೀಣ್. ಎಸ್ ಛಾಯಾಗ್ರಹಣ, ಬಿ.ಎಸ್. ಕೆಂಪರಾಜ್ ಅವರ ಸಂಕಲನ ಹಾಗೂ ಹೇಮಂತ್ ಜೋಯ್ಸ್ ಸಂಗೀತ ಚಿತ್ರಕ್ಕಿದೆ. ರಕ್ಷಿತ್ ತೀರ್ಥಹಳ್ಳಿ ಸಾಹಿತ್ಯ ಬರೆದಿರುವ ಮೂರು ಹಾಡುಗಳಿಗೆ ವಾಸುಕಿ ವೈಭವ್, ಐಶ್ವರ್ಯ ರಂಗರಾಜನ್, ಆದರ್ಶ್ ಅಯ್ಯಂಗಾರ್ ಮತ್ತು ಚಿನ್ಮಯಿ ಚಂದ್ರಶೇಖರ್ ದನಿಯಾಗಿದ್ದಾರೆ.

ಮನುಷ್ಯನ ನಂಬಿಕೆ ಮತ್ತು ಆತನ ಆಚರಣೆಗಳ ಮೇಲೆ ಕೇಂದ್ರೀಕೃತವಾಗಿರುವ ಕಥಾವಸ್ತುವನ್ನು ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಸುತ್ತಲಿನ ಹಲವು ಸುಂದರ ಜಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಇದೀಗ ಮೇಕಿಂಗ್ ಟೀಸರ್ ಬಿಡುಗಡೆ ಮಾಡಿರುವ ಚಿತ್ರ ತಂಡ ಮಾರ್ಕೆಟಿಂಗ್ ಕೆಲಸದಲ್ಲಿ ತೊಡಗಿದ್ದು ಸದ್ಯದಲ್ಲೆ ತೆರೆಯ ಮೇಲೆ ಬರಲು ತಯ್ಯಾರಿ ನಡೆಸಿದೆ.

Share this post:

Related Posts

To Subscribe to our News Letter.

Translate »