Sandalwood Leading OnlineMedia

‘ತ್ರಿಬಾಣಧಾರಿ ಬಾರ್ಬರಿಕ’ ಚಿತ್ರದ ಮೋಷನ್‍ ಪೋಸ್ಟರ್ ಬಿಡುಗಡೆ

 

ಇತ್ತೀಚಿನ ದಿನಗಳಲ್ಲಿ ಹೊಸ ಆಲೋಚನೆಯ ನಿರ್ದೇಶಕರು ತಮ್ಮ ವಿಭಿನ್ನ ಮತ್ತು ವೈವಿಧ್ಯಮಯ ಕಥೆಗಳಿಂದ ಪ್ರೇಕ್ಷಕರನ್ನು ಸೆಳೆಯುತ್ತಿದ್ದಾರೆ. ಕಂಟೆಂಟ್‍ ಆಧಾರಿತ ಚಿತ್ರಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ವಾನರ ಸೆಲ್ಯುಲಾಯ್ಡ್ ಎಂಬ ಹೊಸ ನಿರ್ಮಾಣ ಸಂಸ್ಥೆ ಹೆಜ್ಜೆ ಇಟ್ಟಿದೆ. ಪ್ರೇಕ್ಷಕರಿಗೆ ವಿಭಿನ್ನ ಅನುಭವ ನೀಡುವ ಉದ್ದೇಶದಿಂದ ಈ ಸಂಸ್ಥೆ ಹುಟ್ಟಿಕೊಂಡಿದ್ದು, ಒಂದಿಷ್ಟು ವೈವಿಧ್ಯಮಯ ಚಿತ್ರಗಳನ್ನು ನಿರ್ಮಿಸುತ್ತಿದೆ. ಅದರ ಮೊದಲ ಹಂತವಾಗಿ, ‘ತ್ರಿಬಾಣಧಾರಿ ಬಾರ್ಬರಿಕ’ ಎಂಬ ಚಿತ್ರ ತಯಾರಾಗುತ್ತಿದ್ದು, ಈ ಚಿತ್ರವನ್ನು ವಿಜಯಪಾಲ್‍ ರೆಡ್ಡಿ ಅಡಿಧಲ ನಿರ್ಮಿಸಿದರೆ, ಮೋಹನ್‍ ಶ್ರೀವತ್ಸ ನಿರ್ದೇಶನ ಮಾಡುತ್ತಿದ್ದಾರೆ. ಜನಪ್ರಿಯ ನಿರ್ದೇಶಕ ಮಾರುತಿ ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಪ್ರತಿಭಾವಂತ ಕಲಾವಿದರ ಮತ್ತು ತಂತ್ರಜ್ಞರ ದಂಡೇ ಈ ಚಿತ್ರದಲ್ಲಿದೆ. ಕನ್ನಡಿಗ ವಸಿಷ್ಠ ಸಿಂಹ ಸಹ ಈ ಪ್ಯಾನ್ ಇಂಡಿಯಾ ಚಿತ್ರದ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 15 ರಂದು ತೆರೆಗೆ .

ಇತ್ತೀಚೆಗೆ ‘ತ್ರಿಬಾಣಧಾರಿ ಬಾರ್ಬರಿಕ’ ಚಿತ್ರದ ಮೋಷನ್‍ ಪೋಸ್ಟರ್ ಬಿಡುಗಡೆಯಾಗಿದ್ದು, ಇದರ ಮೂಲಕ ಚಿತ್ರದ ಕಥಾವಸ್ತುವನ್ನು ಪರಿಚಯಿಸಲಾಗಿದೆ. ಪೌರಾಣಿಕ ಮತ್ತು ಸಾಮಾಜಿಕ ಅಂಶಗಳು ಬೆರೆತಿರುವ ಕಥೆ ಇದಾಗಿದೆ. ಭೀಮನ ಮೊಮ್ಮಗ ಮತ್ತು ಘಟೋತ್ಕಚನ ಮಗ ಬಾರ್ಬರಿಕನ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗಿದೆ. ಮೂರು ಬಾಣಗಳನ್ನು ಏಕಕಾಲಕ್ಕೆ ಹೂಡುವ ಬಾರ್ಬರಿಕನ ಅದ್ಭುತ ಪರಾಕ್ರಮವನ್ನು ಈ ಮೋಷನ್‍ ಪೋಸ್ಟರ್ ನಲ್ಲಿ ವಿವರಿಸಲಾಗಿದೆ. ಈ ಜಗತ್ತು ಗಮನಿಸದ ಒಬ್ಬ ಮಹಾವೀರನ ಕಥೆ ಇದು ಎಂದು ಈ ಪೋಸ್ಟರ್ ನಲ್ಲಿ ಬಣ್ಣಿಸಲಾಗಿದೆ. ಒಂದು ಕಡೆ ಪೌರಾಣಿಕ ಕಥೆ ಹೇಳುತ್ತಲೇ, ಇನ್ನೊಂದು ಕಡೆ ಆಧುನಿಕ ಸ್ಪರ್ಶ ಸಹ ನೀಡಲಾಗಿದೆ. ಗಾಂಢೀವಧಾರಿ ಅರ್ಜುನ, ಪಾಶುಪತಾಸ್ತ್ರಂ, ಬ್ರಹ್ಮಾಸ್ತ್ರಂ, ಗರುಡ ಪುರಾಣಂ ಮುಂತಾದ ಪುಸ್ತಕಗಳ ಜೊತೆಗೆ ಗನ್‍ ಸಹ ತೋರಿಸಲಾಗಿದೆ. ಈ ಮೂಲಕ ಪೌರಾಣಿಕ ಮತ್ತು ಸಮಕಾಲೀನ ವಿಷಯಗಳನ್ನು ಈ ಚಿತ್ರದಲ್ಲಿ ಹೇಳಿರುವ ಸೂಚನೆ ನೀಡಲಾಗಿದೆ.

ಸೆಟ್ಟೇರಿತು ರಾಘು ಶಿವಮೊಗ್ಗ ನಿರ್ದೇಶನದ ಹೊಸ ಸಿನಿಮಾ..’ದಿ ಟಾಸ್ಕ್’ನಲ್ಲಿ ನವಪ್ರತಿಭೆಗಳ ಸಂಗಮ

ಈ ಮೋಷನ್‍ ಪೋಸ್ಟರ್, ಚಿತ್ರದ ಬಗ್ಗೆ ನಿರ್ದೇಶಕರಿಗಿರುವ ಒಳನೋಟ ಮತ್ತು ಒಂದೊಳ್ಳೆಯ ಚಿತ್ರವನ್ನು ಪ್ರೇಕ್ಷಕರಿಗೆ ನೀಡಬೇಕೆಂಬ ನಿರ್ಮಾಪಕರನ್ನು ಬದ್ಧತೆಯನ್ನು ಎತ್ತಿಹಿಡಿಯುತ್ತಿದೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಇನ್ಫ್ಯೂಷನ್‍ ಬ್ಯಾಂಡ್‍ ಎಂಬ ಸಂಗೀತ ತಂಡವು ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದು, ವೀಡಿಯೋ ನೋಡುತ್ತಿದ್ದಂತೆಯೇ ಪ್ರೇಕ್ಷಕರಿಗೆ ರೋಮಾಂಚನ ಉಂಟಾಗುತ್ತದೆ. ಅವರ ಧ್ವನಿ, ಪ್ರೇಕ್ಷಕರ ಮೇಲೆ ಗಾಢವಾದ ಪರಿಣಾಮವನ್ನು ಉಂಟು ಮಾಡುತ್ತದೆ. ‘ತ್ರಿಬಾಣಧಾರಿ ಬಾರ್ಬರಿಕ’ ಚಿತ್ರದಲ್ಲಿ ಸತ್ಯರಾಜ್‍, ವಸಿಷ್ಠ ಸಿಂಹ, ಸಂಚಿ ರೈ, ಸತ್ಯಂ ರಾಜೇಶ್‍, ಕ್ರಾಮತಿ ಕಿರಣ್‍, ಮೊಟ್ಟ ರಾಜೇಂದ್ರ, ವಿ.ಟಿ.ವಿ. ಗಣೇಶ್‍, ಉದಯಭಾನು ಮುಂತಾದವರು ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಕುಶೇಂದರ್ ರಮೇಶ್‍ ರೆಡ್ಡಿ ಛಾಯಾಗ್ರಹಣ, ಮಾರ್ತಾಂಡ ವೆಂಕಟೇಶ್‍ ಸಂಕನ ಮತ್ತು ಶ್ರೀನಿವಾಸ್ ಪನ್ನ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ರಾಮ್‍ ಸಂಕರ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದ್ದಾರೆ. ಚಿತ್ರೀಕರಣ ಮುಗಿದು ಸದ್ಯ ಪೋಸ್ಟ್ ಪ್ರೊಡಕ್ಷನ್‍ ಹಂತದಲ್ಲಿರುವ ‘ತ್ರಿಬಾಣಧಾರಿ ಬಾರ್ಬರಿಕ್‍’ ತನ್ನ ಪೋಸ್ಟರ್ ಮೂಲಕವೇ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದ್ದು, ಈ ಚಿತ್ರವು ಪ್ಯಾನ್‍ ಇಂಡಿಯಾ ಚಿತ್ರಾಗಿ ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

Share this post:

Translate »