ಫೀನಿಕ್ಸ್ ಪ್ರೊಡಕ್ಷನ್ ಬ್ಯಾನರ್ ನಡಿ ಅನಿಲ್ ರಾಜ್ ಸಂಕೇತ್ ಹಾಗೂ ಉಮೇಶ್ ಎಲ್ ಧರ್ಮಶಿ ನಿರ್ಮಾಣದಲ್ಲಿ ತಯಾರಾಗಿರುವ ಚಿತ್ರ “ಸಂಭ್ರಮ”, ರಂಗಭೂಮಿಯಲ್ಲಿ ಪಳಗಿರುವ ಪ್ರತಿಭೆ ಶ್ರೀ ಸಂಭ್ರಮ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಸಿನಿಮಾ ಮೂಲಕ ಶ್ರೀ ಸಂಭ್ರಮ ನಿರ್ದೇಶಕರಾಗಿ ಚಿತ್ರರಂಗಕ್ಕೆ ಅಡಿಇಡ್ತಿದ್ದಾರೆ. ಯುವ ಪ್ರತಿಭೆಗಳಾದ ಅಭಯ್ ವೀರ್, ವೀರೆಂದ್ರ ಶೆಟ್ಟಿ,ರಿಧಿ ರಾಥೋರ್, ಕಿರಣ್ ಕುಮಾರ್, ಯಶವಂತ್, ರಾಘವೇಂದ್ರ , ಸ್ಪೂರ್ತಿ ಹಾಗೂ ಶ್ರಾವಣಿ ಚಿತ್ರದಲ್ಲಿ ನಟಿಸಿದ್ದಾರೆ.
ಸಂಭ್ರಮ ಒಂದು ರೋಮ್ಯಾಂಟಿಕ್ ಯೂತ್ ಫುಲ್ ಎಂಟರ್ ಟೈನರ್ ಸಿನಿಮಾವಾಗಿದೆ. ಈ ಚಿತ್ರಕ್ಕೆ ಮ್ಯೂಸಿಕಲ್ ಮಾಂತ್ರಿಕ ಮನೋಮೂರ್ತಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಸೋನು ನಿಗಂ, ಮನೋಮೂರ್ತಿ ಮತ್ತು ಜಯಂತ್ ಕಾಯ್ಕಿಣಿಯವರ ಹಿಟ್ ಕಾಂಬಿನೇಷನ್ ಈ ಸಿನಿಮಾದಲ್ಲಿ ಮತ್ತೆ ಒಂದಾಗಿರುವುದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಸಂಭ್ರಮ ಸಿನಿಮಾವನ್ನು ಹೊಸಪೇಟೆ, ಗಂಗಾವತಿ, ಸಿಂಧನೂರು ಸುತ್ತಮುತ್ತ 47 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದ್ದು, ಚಿತ್ರದ ಸೆನ್ಸಾರ್ ಮುಗಿದಿದ್ದು ಆದಷ್ಟು ಬೇಗ ತೆರೆಗೆ ಬರಲಿದೆ.