Sandalwood Leading OnlineMedia

 “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಫಸ್ಟ್‌ ಲುಕ್ ಟೀಸರ್ಗೆ ಪ್ರೇಕ್ಷಕರಿಂದ ಮೆಚ್ಚುಗೆ

ಯೋಗರಾಜ್ ಸಿನಿಮಾಸ್ ಹಾಗೂ ಪರ್ಲ್ ಸಿನಿ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರಕ್ಕೆ ಕೆ‌.ರಾಮನಾರಾಯಣ್ ನಿರ್ದೇಶನ
.
ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ & ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. ಟೀಸರ್ ನಲ್ಲಿ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ. ಸಕಲೇಶ ಪುರ, ಹಾಸನ, ರಾಮನಗರ, ಬೆಂಗಳೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ನಿರ್ದೇಶನ ಮಾಡುತ್ತಿದ್ದಾರೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು ಮನೋಮೂರ್ತಿ ಸಂಗೀತ ನೀಡುತ್ತಿದ್ದಾರೆ. ಮಡೆನೂರ್ ಮನು, ಮೌನ ಗುಡ್ಡೆಮನೆ, ರಂಗಾಯಣ ರಘು, ದಿಗಂತ್ ಶರತ್ ಲೋಹಿತಾಶ್ವ, ಸೋನಾಲ್ ಮೊಂತೆರೊ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

 

 

 

 

ಸಂಕಷ್ಟದಲ್ಲಿ ನಟಿ ಪದ್ಮಜಾ ರಾವ್; ಯಾರಿವರು ವಿರೇಂದ್ರ ಶೆಟ್ಟಿ ?

 

 

ಸದ್ದು ಮಾಡುತ್ತಿದೆ “UI” ಚಿತ್ರದ “ಸೌಂಡ್ ಆಫ್ ಯುಐ”

 

 

ಖ್ಯಾತ ನಿರ್ದೇಶಕ ಪವಿತ್ರನ್ ಸಾರಥ್ಯದಲ್ಲಿ  ‘ಕರ್ಕಿ’ ಸಿನಿಮಾ ; ಟ್ರೇಲರ್ ನಲ್ಲಿ ಹೊರಬಿತ್ತು ಜಾತಿ ಸಂಘರ್ಷದ ಕಿಡಿ

Share this post:

Translate »