ಬಹಳವರ್ಷಗಳ ನಂತರ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ “ಉಂಡೆನಾಮ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ನವರಸ ನಾಯಕ ಜಗ್ಗೇಶ್ ಟ್ರೇಲರ್ ಬಿಡುಗಡೆ ಮಾಡಿದರು. ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
Pentagon’ Kannada Movie Review : ಪಂಚ ಕಥೆಗಳ ಪವರ್‌ಫುಲ್ ಪಂಚ್!`
ಬಹಳ ದಿನಗಳ ನಂತರ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕ ರಾಜಶೇಖರ್ ಅವರು ಹೇಳಿದ ಕಥೆ ಇಷ್ಟವಾಯಿತು. ನನ್ನ ಜೊತೆ ನಟಿಸಿರುವ ತಬಲನಾಣಿ, ಹರೀಶ್ ರಾಜ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಏಪ್ರಿಲ್ 14 ಚಿತ್ರ ತೆರೆಗೆ ಬರಲಿದೆ. ನೋಡಿ ಹಾರೈಸಿ ಎಂದರು ನಾಯಕ ಕೋಮಲ್ ಕುಮಾರ್.
ಸದ್ದಿಲ್ಲದೆ ಸಿದ್ಧವಾಯ್ತು ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಚಿಣ್ಣರ ಚಂದ್ರ’ ಚಿತ್ರ
ಮೊದಲ ಲಾಕ್ ಡೌನ್ ನಲ್ಲಿ ಕಥೆ ಬರೆದೆ. ಆನಂತರ ನಿರ್ಮಾಪಕ ನಂದಕಿಶೋರ್ ಅವರ ಬಳಿ ಕಥೆ ಹೇಳಿದಾಗ, ಅವರು ಈ ಚಿತ್ರವನ್ನು ಕೋಮಲ್ ಅವರು ಮಾಡಬೇಕು ಎಂದರು. ನಾನು ಕೋಮಲ್ ಅವರಿಗಾಗಿಯೇ ಈ ಕಥೆ ಮಾಡಿದೆ. ಆದರೆ ಅವರು ನಟಿಸಲು ಒಪ್ಪುತ್ತಾರೊ? ಇಲ್ಲವೊ? ಎಂಬ ಆತಂಕವಿತ್ತು. ಕಥೆ ಕೇಳಿದ ಕೋಮಲ್ ಅವರು, ಈ ಕಥೆ ಚೆನ್ನಾಗಿದೆ. ನಾನಲ್ಲ. ಯಾರು ಮಾಡಿದರೂ ಈ ಚಿತ್ರ ಯಶಸ್ವಿಯಾಗುತ್ತದೆ ಎಂದರು. ಅದು ಅವರ ದೊಡ್ಡ ಗುಣ. ಸಹಕಾರ ನೀಡಿದ ನಿರ್ಮಾಪಕರಿಗೆ, ತಂತ್ರಜ್ಞರಿಗೆ ಹಾಗೂ ಕಲಾವಿದರಿಗೆ ನನ್ನ ಅಭಿನಂದನೆ ಎಂದರು ನಿರ್ದೇಶಕ ಕೆ.ಎಲ್ ರಾಜಶೇಖರ್.
ಗಮನಸೆಳೆಯುತ್ತಿದೆ `ಮಲ್ಲು ಜಮಖಂಡಿ’ ನಿರ್ದೇಶನದ ‘ನನ್ನಾಕಿ’ ಚಿತ್ರದ trailer
ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಜಗ್ಗೇಶ್ ಅವರಿಗೆ ಧನ್ಯವಾದ. ಇಡೀ ತಂಡದ ಶ್ರಮದಿಂದ “ಉಂಡೆನಾಮ” ಚಿತ್ರ ಚೆನ್ನಾಗಿ ಬಂದಿದೆ. ಏಪ್ರಿಲ್ 14 ಚಿತ್ರ ಬಿಡುಗಡೆಯಾಗಲಿದೆ. ನೋಡಿ ಪ್ರೋತ್ಸಾಹಿಸಿ ಎಂದರು ನಿರ್ಮಾಪಕರಾದ ಟಿ.ಆರ್ ಚಂದ್ರಶೇಖರ್ ಹಾಗೂ ಸಿ.ನಂದಕಿಶೋರ್. ಚಿತ್ರದಲ್ಲಿ ನಟಿಸಿರುವ ಹರೀಶ್ ರಾಜ್, ತಬಲನಾಣಿ, ಅಪೂರ್ವ ಹಾಗೂ ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್ ಚಿತ್ರದ ಕುರಿತು ಮಾತನಾಡಿದರು.