Sandalwood Leading OnlineMedia

*`ವಾಹ್’ ಅನ್ನಿಸುವ `ವಾಮನ’ನನ ವಾ.. ವಾ… ವಾ.. ಟೈಟಲ್ ಟ್ರಾಕ್ : ಶೋಕ್ದಾರ್ ಧನ್ವೀರ್ ಮಾಸ್ ಎಂಟ್ರಿ*

ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟನೆಯ ಬಹುನಿರೀಕ್ಷಿತ ವಾಮನ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ವಾ..ವಾ..ವಾ..ವಾಮನ ಅಂತಾ ಬಜಾರ್ ಹುಡ್ಗ ಮಾಸ್ ಎಂಟ್ರಿ ಕೊಟ್ಟಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಬರೆದಿರುವ ಸಾಹಿತ್ಯದ ಹಾಡಿಗೆ ಶಶಾಂಕ್ ಶೇಷಗಿರಿ ಧ್ವನಿಯಾಗಿದ್ದು, ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದಾರೆ. ಭೂಷಣ್ ಮಾಸ್ಟರ್ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ನಾಯಕನ ಇಂಟ್ಯೂಡಕ್ಷನ್ ಹಾಡಿಗೆ ಧನ್ವೀರ್ ಜಬರ್ದಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ. ಈಕ್ವಿನಾಕ್ಸ್ ಗ್ಲೋಬಲ್‌ ಎಂಟರ್‌ಟೈನ್ಮೆಂಟ್‌ ಬ್ಯಾನರ್‌ ಅಡಿಯಲ್ಲಿ “ಚೇತನ್‌ ಗೌಡ” ಅದ್ಧೂರಿಯಾಗಿ ನಿರ್ಮಿಸಿರುವ ವಾಮನ ಸಿನಿಮಾವನ್ನು ಯುವ ನಿರ್ದೇಶಕ “ಶಂಕರ್‌ ರಾಮನ್‌” ರಚಿಸಿ ನಿರ್ದೇಶಿಸಿದ್ದಾರೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ನಡೆದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಇಡೀ ಚಿತ್ರತಂಡ ಭಾಗಿಯಾಗಿ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ*‘ಚಂದ್ರಮುಖಿ-2’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ತಲೈವ… ವೈರಲ್ ಆಯ್ತು ರಾಘವನ್ ಲಾರೆನ್ಸ್ ಲುಕ್…*

ನಿರ್ದೇಶಕ ಶಂಕರ್ ರಾಮನ್ ಮಾತನಾಡಿ, ಕಥೆಯಲ್ಲಿ ಬರುವ ಪಾತ್ರಗಳಿಗಷ್ಟೇ ಕೌಂಟರ್ ಕೊಡುತ್ತಿರುವುದು. ಬೇರೆ ಯಾರಿಗೂ ಅಲ್ಲ. ನಾಯಕ ಗುಣ ಪಾತ್ರ ನೀರು ಇದ್ದಾಗೆ. ರಾವಣ, ದುರ್ಯೋಧನ ಇಬ್ಬರನ್ನೂ ಆವರಿಸಿಕೊಳ್ಳುತ್ತಾರೆ. ವಾಮನನ್ನು ಆವರಿಸಿಕೊಳ್ಳುತ್ತಾರೆ. ಸಮಯ ಬಂದಾಗ ದಶಾವತಾರದಲ್ಲಿರುವ ಪಾತ್ರವನ್ನು ಆವರಿಸಿಕೊಳ್ಳುತ್ತಾರೆ. ಚಿತ್ರದಲ್ಲಿ ನಾಲ್ಕ ಆಕ್ಷನ್ ಸೀಕ್ವೆನ್ಸ್ ಇದೆ. ಮಾಸ್ ಆಡಿಯನ್ಸ್ ಗೆ ಏನ್ ಬೇಕು ಅದು ಇದೆ. ಕ್ಲಾಸ್ ಆಡಿಯನ್ಸ್ ಬೇಕಾದ ಕಥೆಯು ಇದೆ ಎಂದರು. ನಾಯಕ‌ ಧನ್ವೀರ್ ಮಾತನಾಡಿ, ವಾಮನ ಇದು ನನ್ನ ಮೂರನೇ ಸಿನಿಮಾ. ಇಂದು ಟೈಟಲ್ ಸಾಂಗ್ ರಿಲೀಸ್ ಮಾಡಿದ್ದೇವೆ. ಈ ತರ ಸಾಂಗ್ ನ್ನ ನನ್ನ ಹಿಂದಿನ ಸಿನಿಮಾಗಳಲ್ಲಿ ಎಕ್ಸ್ ಪೆಕ್ಟ್ ಮಾಡಿದ್ದೆ. ಆದರೆ ಚೇತನ್ ಸರ್ ನನ್ನ ಹಿಂದೆ ಇಟ್ಟುಬಿಟ್ಟಿದ್ದರು. ಹೋದ ಸಿನಿಮಾದಲ್ಲಿಯೇ ಇದು ಆಗಬೇಕಿತ್ತು. ಅವರ ಬರವಣಿಗೆಗೆ ನಾನು ದೊಡ್ಡ ಫ್ಯಾನ್. ಅವರ ಪದ ಜೋಡಣೆ ಎಲ್ಲಾ ಚೆನ್ನಾಗಿರುತ್ತದೆ. ಸಿನಿಮಾದಲ್ಲಿ ಒಳ್ಳೆ ಕಂಟೆಂಟ್ ಇದೆ. ಇವತ್ತಿನಿಂದ ನಮ್ಮ ಸಿನಿಮಾ ಪ್ರಮೋಷನ್ ಶುರುವಾಗಿದೆ. ನಿಮ್ಮ ಸಪೋರ್ಟ್ ಇರಲಿ ಎಂದರು.

ಇದನ್ನೂ ಓದಿ‘Kousalya Supraja Rama’ movie review: ಕಲಿಯುಗ ರಾಮನ ಮಾಡರ್ನ್ ವನವಾಸ!

ನಾಯಕಿ ರೀಷ್ಮಾ ನಾಣಯ್ಯ ಮಾತಾನಾಡಿ, ವಾಮನ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಇದೆಲ್ಲ ಕ್ರೆಡಿಟ್ ನಿರ್ದೇಶಕರು, ಚೇತನ್ ಸರ್ ಸಾಹಿತ್ಯ, ಶಶಾಂಕ್ ವಾಯ್ಸ್, ಅಜನೀಶ್ ಸಂಗೀತಕ್ಕೆ ಸಲ್ಲಬೇಕು. ಈ ಸಿನಿಮಾದ ಎಲ್ಲಾ ಹಾಡುಗಳು ತುಂಬಾ ಚೆನ್ನಾಗಿ ಬಂದಿದೆ. ನನ್ನ ಪಾತ್ರದ ಹೆಸರು ನಂದಿನಿ. ಸಿಂಪಲ್ ಆದ ಮುದ್ದಾದ ಕ್ಯಾರೆಕ್ಟರ್. ಲವ್ ನಲ್ಲಿಯೇ ಫೈಟ್ ಇದೆ ಎಂದರು. ನಿರ್ಮಾಪಕ ಚೇತನ್ ಗೌಡ ಮಾತನಾಡಿ, ವಾಮನ ಸಿನಿಮಾದಲ್ಲಿ ನಮ್ಮ ಶ್ರಮ ಕಡಿಮೆ. ನಿರ್ದೇಶಕರು, ಆಕ್ಟರ್ಸ್, ಟೆಕ್ನಿಷಿಯನ್ಸ್ ಎಲ್ಲಿಯೂ ಶ್ರಮ ಕೊಡಲಿಲ್ಲ. ನಾನು ಶೂಟಿಂಗ್ ಸ್ಪಾರ್ಟ್ ಗೆ ಹೋಗಿರುವುದು ಕೇವಲ ನಾಲ್ಕು ದಿನವಷ್ಟೇ. ಅವರ ಮನೆ ಸಿನಿಮಾ ಎನ್ನುವಂತೆ ಎಲ್ಲರು ಕೆಲಸ ಮಾಡಿದ್ದಾರೆ. ಒಳ್ಳೆ ಸಿನಿಮಾ ಮಾಡಬೇಕೆಂದು ಬಂದಿದ್ದೆ. ಒಳ್ಳೆ ಸಿನಿಮಾ ಆಗಿದೆ. ಕನ್ನಡ ಸಿನಿಮಾರಂಗಕ್ಕೆ ನಮ್ಮೊಂದು ಕೊಡುಗೆ ಇರಲಿ ಎಂದು ಮಾಡಿದ್ದೇವೆ. ಕೈ ಹಿಡಿದು ಆಶೀರ್ವದಿಸಿ ಎಂದರು.
ಧನ್ವೀರ್‌ಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ಅಭಿನಯಿಸಿದ್ದು, ತಾರಾ, ಸಂಪತ್‌, ಆದಿತ್ಯ ಮೆನನ್‌, ಶಿವರಾಜ್ ಕೆಆರ್ ಪೇಟೆ, ಅವಿನಾಶ್‌, ಅಚ್ಯುತ್‌ ಕುಮಾರ್‌, ಕಾಕ್ರೊಚ್‌ ಸುಧಿ, ಭೂಷಣ್‌ ಮುಂತಾದವು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಅರ್ಜುನ್ ರಾಜ್, ವಿಕ್ರಮ್ ಮೋರ್ ಮತ್ತು ಜಾಲಿ ಬಾಸ್ಟಿನ್ ಆಕ್ಷನ್, ನವೀನ್ ಕಲಾ ನಿರ್ದೇಶನ ಚಿತ್ರಕ್ಕಿದೆ. ಮೊದಲ ಹಾಡು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಪ್ರಚಾರ ಕಾರ್ಯ ಆರಂಭಿಸಿದೆ.

 

Share this post:

Related Posts

To Subscribe to our News Letter.

Translate »