ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕೆಲವೇ ದಿನಗಳ ಹಿಂದೆ ಅವರ ಎಂಗೇಜ್ಮೆಂಟ್ ಫೋಟೋಗಳು ವೈರಲ್ ಆಗಿದ್ದವು. ಈಗ ಮದುವೆ ದಿನಾಂಕ ಕೂಡ ಬಹಿರಂಗವಾಗಿದೆ.
ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿನಟ ವಸಿಷ್ಟ ಸಿಂಹ ಹಾಗೂ ಹರಿಪ್ರಿಯಾ ಮದುವೆ ನಡೆಯಲಿದೆ. ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮವಿದೆ. ಜೋಡಿಗಳು ಇದೇ ತಿಂಗಳ 26ರಂದು ಆಶ್ರಮದಲ್ಲಿ ಮದುವೆಯಾಗುತ್ತಿದ್ದಾರೆ. ವಸಿಷ್ಟಿ ಸಿಂಹ ಹಾಗೂ ಹರಿಪ್ರಿಯಾ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿ ಸ್ವಾಮೀಜಿ ಆಶೀರ್ವಾದ ಪಡೆದಿದ್ಧಾರೆ.
ಖ್ಯಾತ ಚಲನಚಿತ್ರ ನಟರಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರ ವಿವಾಹ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇದೇ ತಿಂಗಳ 26 ರಂದು ನಡೆಯಲಿದೆ. pic.twitter.com/XxBAfeQWLO
— Prathap Simha (@mepratap) January 4, 2023
ವಸಿಷ್ಠ ಸಿಂಹ, ಹರಿಪ್ರಿಯಾ ಜೋಡಿ ಸಾಮಾಜಿಕ ಜಾಲತಾಣದಲ್ಲಿ ಫುಲ್ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ವಿಚಾರಗಳನ್ನು ಮಾತ್ರವಲ್ಲ ತಮ್ಮ ವೈಯಕ್ತಿಕ ವಿಚಾರಗಳನ್ನು ಸಹ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ತಾರೆ. ಆದ್ರೆ ಮದುವೆ ದಿನಾಂಕ ಬಗ್ಗೆ ಈ ಜೋಡಿ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಮದುವೆ ದಿನಾಂಕವನ್ನು ಸಂಸದ ಪ್ರತಾಪ್ ಸಿಂಹ ಪೋಸ್ಟ್ ಮಾಡುವ ಮೂಲಕ ಸಿಂಹ-ಪ್ರಿಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.