Left Ad
*ಒಟಿಟಿಯಲ್ಲೂ ಹ್ಯಾಟ್ರಿಕ್ ಹೀರೋ 'ವೇದ' ಹೊಸ ರೆಕಾರ್ಡ್ - ಸಂತೋಷ್ ಚಿತ್ರಮಂದಿರದಲ್ಲಿ ZEE5 ಗ್ರ್ಯಾಂಡ್ ಸೆಲೆಬ್ರೇಶನ್* - Chittara news
# Tags

*ಒಟಿಟಿಯಲ್ಲೂ ಹ್ಯಾಟ್ರಿಕ್ ಹೀರೋ ‘ವೇದ’ ಹೊಸ ರೆಕಾರ್ಡ್ – ಸಂತೋಷ್ ಚಿತ್ರಮಂದಿರದಲ್ಲಿ ZEE5 ಗ್ರ್ಯಾಂಡ್ ಸೆಲೆಬ್ರೇಶನ್*

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 125ನೇ ಸಿನಿಮಾ ‘ವೇದ’ ಚಿತ್ರಮಂದಿರದಲ್ಲಿ ರೆಕಾರ್ಡ್ ಕ್ರಿಯೇಟ್ ಮಾಡಿದ್ದು ಗೊತ್ತೇ ಇದೆ. ಚಿತ್ರಮಂದಿರದಲ್ಲಿ ಸೂಪರ್ ಸಕ್ಸಸ್ ಕಂಡ ಸಿನಿಮಾ ಫೆಬ್ರವರಿ 10ರಂದು ZEE5ನಲ್ಲಿ ಬಿಡುಗಡೆಗೊಂಡು ಇಲ್ಲಿಯೂ ಹೊಸ ದಾಖಲೆ ಬರೆದಿದೆ. ಬಿಡುಗಡೆಯಾದ ಕೆಲವೇ ದಿನದಲ್ಲಿ 125 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್ಸ್ ಕಂಡು ರೆಕಾರ್ಡ್ ಕ್ರಿಯೇಟ್ ಮಾಡಿದೆ. ಇದೇ ಖುಷಿಯಲ್ಲಿ ZEE5 ಸಂತೋಷ್ ಚಿತ್ರಮಂದಿರದಲ್ಲಿ ಸಂಭ್ರಮ ಆಚರಿಸಿದೆ.

ಮಾರ್ಚ್ 3ರಂದು `ಕಾಸಿನಸರ’

ಸಂತೋಷ್ ಚಿತ್ರಮಂದಿರದಲ್ಲಿ ‘ವೇದ’ ಚಿತ್ರದ ಶಿವಣ್ಣ ಕಟೌಟ್ ನಿಲ್ಲಿಸಿ ZEE5 ಸಂಭ್ರಮ ಆಚರಣೆ ಮಾಡಿದೆ. ಈ ಸಂಭ್ರಮಾಚರಣೆಯಲ್ಲಿ ದೊಡ್ಮನೆ ಅಭಿಮಾನಿಗಳು ಭಾಗಿಯಾಗಿ ಸಂತಸ ಪಟ್ಟಿದ್ದಾರೆ. ಒಟಿಟಿಯಲ್ಲಿ ಅತಿ ಕಡಿಮೆ ಅವಧಿಯಲ್ಲಿ 125 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್ಸ್ ಕಂಡಿದ್ದು ZEE5 ನಲ್ಲಿ ದಾಖಲೆ ಬರೆದಿದೆ. ಈ ಮೂಲಕ ಚಿತ್ರಮಂದಿರದ ಜೊತೆಗೆ ZEE5 ಒಟಿಟಿಯಲ್ಲೂ ಸಿನಿಮಾ ಹೊಸ ದಾಖಲೆ ತನ್ನದಾಗಿಸಿಕೊಂಡಿದೆ.

ಚಿಕ್ಕಬಳ್ಳಾಪುರದ ದೊಡ್ಡ ಪ್ರತಿಭೆ: ಶತಕದತ್ತ ಚಿತ್ರಸಾಹಿತಿ ವರದರಾಜ್  

‘ವೇದ’ ಸಿನಿಮಾ ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ ಕಾಂಬಿನೇಶನ್ ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ. ಸಾಕಷ್ಟು ನಿರೀಕ್ಷೆಯೊಂದಿಗೆ ಡಿಸೆಂಬರ್ 23ರಂದು ಬಿಡುಗಡೆಗೊಂಡಿತ್ತು. ಗೀತಾ ಶಿವರಾಜ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾವಾಗಿರುವ ಈ ಚಿತ್ರ ಶಿವಣ್ಣ ಅಭಿನಯದ 125ನೇ ಸಿನಿಮಾ ಅನ್ನೋದು ಚಿತ್ರದ ವಿಶೇಷ.

 

*‘ಆರಾಮ್ ಅರವಿಂದ್ ಸ್ವಾಮಿ’ ಗೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ*

ಚಿತ್ರದಲ್ಲಿ ಗಾನವಿ ಲಕ್ಷ್ಮಣ್, ಶ್ವೇತ ಚೆಂಗಪ್ಪ, ಉಮಾಶ್ರೀ, ಅದಿತಿ ಸಾಗರ್, ವೀಣಾ ಪೊನ್ನಪ್ಪ, ಕುರಿ ಪ್ರತಾಪ್, ಲಾಸ್ಯ ನಾಗರಾಜ್ ಸೇರಿದಂತೆ ಬಹುದೊಡ್ಡ ತಾರಗಣ ‘ವೇದ’ ಚಿತ್ರದಲ್ಲಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಚಿತ್ರದ ಹಾಡುಗಳು ಮೋಡಿ ಮಾಡಿದ್ದು, ಸ್ವಾಮಿ ಜೆ ಗೌಡ ಛಾಯಾಗ್ರಹಣ, ದೀಪು.ಎಸ್. ಕುಮಾರ್ ಸಂಕಲನ ಚಿತ್ರಕ್ಕಿದೆ.

 

Spread the love
Translate »
Right Ad