Sandalwood Leading OnlineMedia

ಕನ್ನಡದಲ್ಲಿಯೂ ಲಭ್ಯ ತಮಿಳಿನ ‘ವಿಡುದಲೈ’ ಸಿನಿಮಾ..Zee5 ಒಟಿಟಿಯಲ್ಲಿ ವೆಟ್ರಿಮಾರನ್-ವಿಜಯ್ ಸೇತುಪತಿ ಕಾಂಬೋದ ಚಿತ್ರಕ್ಕೆ ಪ್ರೇಕ್ಷಕ ಫಿದಾ

ತಮಿಳು ಚಿತ್ರರಂಗದ ಮಾಸ್ ಡೈರೆಕ್ಟರ್ ವೆಟ್ರಿಮಾರನ್ ನಿರ್ದೇಶನದ ವಿಡುದಲೈ ಸಿನಿಮಾ Zee5 ಒಟಿಟಿಯಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದೆ. ವಿಜಯ್ ಸೇತುಪತಿ, ಸೂರಿ, ಕನ್ನಡದ ಸರ್ದಾರ್ ಸತ್ಯ, ಪ್ರಕಾಶ್ ರೈ, ಗೌತಮ್ ಮೆನನ್ ಸೇರಿದಂತೆ ಹಲವರು ನಟಿಸಿರುವ ಈ ಚಿತ್ರ ಈಗ ಕನ್ನಡದಲ್ಲಿಯೂ ಲಭ್ಯವಿದೆ.

ಚಿತ್ರರಂಗದ ಗಣ್ಯರಿಂದ ಬಿಡುಗಡೆಯಾಯಿತು “ಸೈರನ್” ಟ್ರೇಲರ್

ಇತ್ತೀಚೆಗೆ ಪರಭಾಷೆ ಚಿತ್ರಗಳನ್ನು ಕನ್ನಡಕ್ಕೆ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದ್ದು, ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿವೆ. ಈಗ ವಿಡುದಲೈ ಸಿನಿಮಾ ಕೂಡ ಕನ್ನಡದಲ್ಲಿ ನೋಡುವ ಅವಕಾಶ ದೊರೆತಿದೆ. ಮೂಲ ತಮಿಳಿನ ಈ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡಿ Zee5 ಒಟಿಟಿಯಲ್ಲಿ ಬಿಡುಗಡೆ ಮಾಡಲಾಗಿದೆ.

ಆಸ್ಟ್ರೇಲಿಯಾದಲ್ಲಿ ಅರಳಿದ ಬ್ರಹ್ಮಕಮಲ

ಆರ್‌.ಎಸ್‌. ಇನ್ಫೋಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಎಸ್. ಎಲ್ರೆಡ್ ಕುಮಾರ್ ಅದ್ಧೂರಿಯಾಗಿ ವಿಡುದಲೈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಕಾನ್ಸ್ಟೆಬಲ್ ಹಾಗೂ ಶಸಸ್ತ್ರ ಕ್ರಾಂತಿಕಾರಿ ಹೋರಾಟಗಾರನೊಬ್ಬನ ನಡುವಿನ ಕತೆಯನ್ನು ಒಳಗೊಂಡ ಈ ಚಿತ್ರ ಎರಡು ಭಾಗದಲ್ಲಿ ತೆರೆಗೆ ಬರ್ತಿದೆ. ಮೊದಲ ಪಾರ್ಟ್ ಗೆ ಈಗಾಗ್ಲೇ ಭಾರೀ ರೆಸ್ಪಾನ್ಸ್ ಸಿಕ್ಕಿದ್ದು, ಸದ್ಯ ಎರಡನೇ ಭಾಗದ ಶೂಟಿಂಗ್ ಭರದಿಂದ ಸಾಗುತ್ತಿದೆ.

Share this post:

Related Posts

To Subscribe to our News Letter.

Translate »