ವಿಶಿಷ್ಟ, ವಿಭಿನ್ನ ಹಾಗೂ ವಿಶೇಷ ಕಥಾಹಂದರ ಹೊಂದಿರುವ “ಜೂಮ್ ಕಾಲ್” ಚಿತ್ರದ ಡಬ್ಬಿಂಗ್ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ಸ್ ಬಿರುಸಿನಿಂದ ಸಾಗಿದೆ.ಜನ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳನ್ನು ಇಷ್ಟ ಪಡುತ್ತಾರೆ. ನಮ್ಮ ಸಿನಿಮಾದಲ್ಲೂ ಒಳ್ಳೆಯ ಕಂಟೆಂಟ್ ಇದೆ. ಜನ ಮೆಚ್ಚಿ ಕೊಳ್ಳುವ ಭರವಸೆಯಿದೆ ಎನ್ನುತ್ತಾರೆ ನಿರ್ದೇಶಕ ಮಹೇಶ್ ಹೆಚ್.ಎಂ.
ಡಿಸೆಂಬರ್ 9 ರಂದು “ಕ್ಷೇಮಗಿರಿಯಲ್ಲಿ ಕರ್ ನಾಟಕ” ಚಿತ್ರ ಬಿಡುಗಡೆ
ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು, ಚಿತ್ರದ ಶೀರ್ಷಿಕೆ ಬಗ್ಗೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಿರ್ದೇಶಕ ಮಹೇಶ್ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, ಶ್ರೀವಾರಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವನ್ನೂ ಮಾಡಿದ್ದಾರೆ. ಇದು ಅವರ ನಿರ್ದೇಶನದ ಮೊದಲ ಚಿತ್ರ. ಎಸ್ ಮಂಜು ಕೊಪ್ಪಳ್ ಛಾಯಾಗ್ರಹಣ ಹಾಗೂ ಸಂಕಲನವಿರುವ ಈ ಚಿತ್ರಕ್ಕೆ ವಿಜಯ್ ರಾಜ್ ಸಂಗೀತ ನೀಡಿದ್ದಾರೆ.ರೇಣುಕಾ, ಲಕ್ಷ್ಮೀ ಅರಸ್, ರೂಪ ಮನಕೂರ್, ಅರ್ಜುನ್, ಮಹೇಂದ್ರ, ಪರಮ್ ಮುಂತಾದವರು “ಜೂಮ್ ಕಾಲ್'” ನಲ್ಲಿ ಅಭಿನಯಿಸಿದ್ದಾರೆ.